ಫಸಲ್ ಭೀಮಾ ಯೋಜನೆಯಡಿ ಅವ್ಯವಹಾರ ಆರೋಪ
Jul 21 2024, 01:20 AM ISTಕನ್ನಡಪ್ರಭ ವಾರ್ತೆ ವಿಜಯಪುರ ಫಸಲ್ ಭೀಮಾ ಯೋಜನೆಯಡಿ ವಿಮೆ ಕಟ್ಟಿದ ಜಿಲ್ಲೆಯ ಸಾವಿರಾರು ರೈತರಿಗೆ ಅನ್ಯಾಯವಾಗಿದ್ದು, ಈ ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿದೆ. ರೈತರಿಗೆ ವಿಮೆಯ ಹಣದ ಪರಿಹಾರಕ್ಕಾಗಿ ಆಗ್ರಹಿಸಿ ಜುಲೈ 23ರಂದು ನಗರದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದರು.