ಹಣದ ಕೊರತೆಯಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಮಂಜುನಾಥ್ ಆರೋಪ
Feb 12 2024, 01:34 AM ISTರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿ ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ನಯಾಪೈಸೆ ಅನುದಾನ ದೊರಕದೆ ಅಭಿವೃದ್ಧಿ ಕುಂಠಿತವಾಗಿದೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನಕ್ಕೆ ಸರ್ಕಾರ ಕೋಕ್ ನೀಡಿದೆ. ಮೊದಲೇ ಮೇವಿನ ದರ ಏರಿಕೆ, ಬೇಸಿಗೆಯಿಂದ ತತ್ತರಿಸಿರುವ ರೈತರ ಜೀವನೋಪಾಯ ಕಷ್ಟವಾಗಿರುವ ಸಂದರ್ಭದಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಕರ್ತವ್ಯ.