ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಫ್ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.
ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹ 14,131 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವಕ್ಫ್ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಸುಳ್ಳು. ಬಿ.ವೈ.ವಿಜಯೇಂದ್ರ ಅವರು ನನಗೆ 150 ಕೋಟಿ ರು. ಆಫರ್ ನೀಡಿರಲಿಲ್ಲ. ವಕ್ಫ್ ಆಸ್ತಿ ಅಕ್ರಮದ ವರದಿ ಮುಚ್ಚಿ ಹಾಕಲು ಕಾಂಗ್ರೆಸ್ನಿಂದಲೇ ನನಗೆ ಕೋಟಿ ಕೋಟಿ ಆಫರ್ ಬಂದಿತ್ತು.