ವಕ್ಫ್ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ
Oct 28 2024, 01:04 AM ISTಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.