ಜಾನುವಾರು, ಆಸ್ತಿ ರಕ್ಷಣೆಗೆ ಆದ್ಯತೆ: ಜಿಲ್ಲಾಧಿಕಾರಿ ಸೂಚನೆ
Jul 20 2024, 12:46 AM ISTಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಶುಕ್ರವಾರ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸೂಚಿಸಿದರು.