ಮನಮೋಹನ್ ಸಿಂಗ್ ದೇಶದ ಅತ್ಯಮೂಲ್ಯ ಆಸ್ತಿ
Dec 29 2024, 01:18 AM ISTಆರ್ಥಿಕ ಸುಧಾರಣೆಯಲ್ಲಿ ಕ್ರಾಂತಿ ಉಂಟು ಮಾಡಿದವರು, ಈ ದೇಶ ಕಂಡಂತಹ ಅಪರೂಪದ ರಾಜಕಾರಣಿಗಳು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.