ಉಡುಪಿ: ಮನೆಮನೆಗೆ ಬರುತ್ತಿದ್ದಾರೆ ಪೊಲೀಸರು!
Jul 11 2025, 11:48 PM ISTಉಡುಪಿ ನಗರ ಠಾಣೆ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳ ವತಿಯಿಂದಲೂ ‘ಮನೆಮನೆ ಪೊಲೀಸ್’ ಅಭಿಯಾನ ಕೈಗೊಳ್ಳಲಾಯಿತು. ಪೊಲೀಸರು ಮನೆಮನೆಗಳಿಗೆ ತೆರಳಿ ಸಾರ್ವಜನಿಕರಿಗೆ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.