ಉದ್ಯೋಗ ಮಸೂದೆ ಮಂಡನೆಗೆ ಕನ್ನಡಸೇನೆ ಆಗ್ರಹ
Jul 23 2024, 12:36 AM ISTರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಆದರೆ, ಖಾಸಗಿ ಉದ್ಯಮಿಗಳಿಂದ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಸಂಪುಟದಲ್ಲಿ ತೀರ್ಮಾನಿಸಿದ ಕಾಯ್ದೆಯನ್ನು ಸದನದಲ್ಲೇ ಮಂಡಿಸಿ ವಿರೋಧ ಮಾಡುತ್ತಿರುವ ಕಾರ್ಪೋರೇಟ್ ವಲಯದವರಿಗೆ ತಕ್ಕ ಪಾಠ ಕಲಿಸಬೇಕು.