ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ ಕಂಪನಿ. ಅದಕ್ಕೆ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.
ಮೈಸೂರಿನ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 80 ವರ್ಷಗಳ ಹಿಂದೆ ಸ್ಥಾಪಿಸಿದ್ದ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ದೇಶದ ಹೆಮ್ಮೆಯ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್)ಗೆ ಇದೀಗ ‘ಮಹಾರತ್ನ’ ಸ್ಥಾನಮಾನ ನೀಡಲಾಗಿದೆ.