27 ರಂದು ಕನ್ನಡ ಭವನ ಉದ್ಘಾಟನೆಗೆ ಸಿದ್ಧತೆ
May 23 2025, 12:35 AM ISTಮೇ 27 ರಂದು ಬೆಳಿಗ್ಗೆ 8.30 ಕ್ಕೆ ಕನ್ನಡ ಭವನ ಮುಂಭಾಗದಲ್ಲಿ ರಾಷ್ಟ್ರಧ್ವಜ, ನಾಡ ಧ್ವಜ, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ. ರಾಷ್ಟ್ರಧ್ವಜವನ್ನು ಸಚಿವ ಡಾ.ಎಂ.ಸಿ.ಸುಧಾಕರ್ ನೆರವೇರಿಸಲಿದ್ದಾರೆ, ನಾಡ ಧ್ವಜವನ್ನು ಶಾಸಕ ಪ್ರದೀಪ್ ಈಶ್ವರ್, ಪರಿಷತ್ತಿನ ಧ್ವಜವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕೋಡಿರಂಗಪ್ಪ ನೆರವೇರಿಸುತ್ತಾರೆ.