ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆ ಅಪಾರ
Jul 07 2024, 01:18 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆಯೂ ಅಪಾರವಾಗಿದೆ, ಅಲ್ಲದೇ, ಸಾಹಿತ್ಯವೂ ಅಷ್ಟೇ ಶ್ರೀಮಂತವಾಗಿದೆ. ದೇಶದಲ್ಲಿ ಕನ್ನಡ ಭಾಷೆಗಿರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ. ಭಾಷೆಯ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಎತ್ತಿಹಿಡಿಯುವ ಮೂಲಕ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಕಾಮರಾಜ ಬಿರಾದಾರ ಭರವಸೆ ನೀಡಿದರು.