ಫೆ.10ಕ್ಕೆ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Jan 27 2024, 01:16 AM ISTಗುಳೇದಗುಡ್ಡ: ಫೆ.10ರಂದು ತಾಲೂಕಿನ ಕಟಗೇರಿ ಗ್ರಾಮದಲ್ಲಿ ಗುಳೇದಗುಡ್ಡ ತಾಲೂಕಿನ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ. 10ರಂದು ಬೆಳಗ್ಗೆ 7.30 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ನಾಡಧ್ವಜ ಮತ್ತು ತಾಲೂಕು ಅಧ್ಯಕ್ಷ ಎಚ್.ಎಸ್.ಘಂಟಿ ಪರಿಷತ್ ಧ್ವಜಾರೋಹಣ ನೆರವೇರಿಸುವರು.9 ಗಂಟೆಗೆ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆ, 11 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆ ಜರುಗುವುದು.