ಮೇ ತಿಂಗಳಿನಲ್ಲಿ ಮುಂಡರಗಿ ಕನ್ನಡ ಸಾಹಿತ್ಯ ಭವನ ಲೋಕಾರ್ಪಣೆ
Apr 01 2025, 12:47 AM ISTಮುಂಡರಗಿ ಪಟ್ಟಣದ ಅನ್ನದಾನೀಶ್ವರ ತಾಲೂಕು ಕ್ರೀಡಾಂಗಣ ಬಳಿ ಜ.ಡಾ. ಅನ್ನದಾನೀಶ್ವರ ಸ್ವಾಮಿಗಳು ಕನ್ನಡ ಸಾಹಿತ್ಯ ಭವನದ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ದಾನ ನೀಡಿದ್ದು, ಈಗಾಗಲೇ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಮೇ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ಹೇಳಿದರು.