ಪ್ರೀತಮ್ ನಾಯಕ್‌ಗೆ ‘ಕನ್ನಡ ಸಿರಿ’ ಪ್ರಶಸ್ತಿ
Jul 03 2025, 11:48 PM ISTಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರಿಗೆ ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಆಡಿಟೋರಿಯಂನಲ್ಲಿ ಕಲಾ ಜಗತ್ತು ಮುಂಬೈ ಅಧ್ಯಕ್ಷ ತೋನ್ಸೆ ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.