ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಿ

Aug 18 2025, 12:00 AM IST
ವಹಿವಾಟು ನಡೆಸುತ್ತಿರುವ ವರ್ತಕರು ತಮ್ಮ ಅಂಗಡಿಗಳ ನಾಮಫಲಕಗಳಲ್ಲಿ ಶೇ. ೬೦ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬುದಾಗಿ ಕರ್ನಾಟಕ ಸರ್ಕಾರವು ಕಳೆದ ವರ್ಷದ ಜನವರಿ ೫ರಂದು ಅಧಿಸೂಚನೆ ಹೊರಡಿಸಿದೆ. ಇದು ಪಾಲನೆಯಾಗುತ್ತಿಲ್ಲ, ಅಧಿಸೂಚನೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಬಳಕೆ, ಮಿಕ್ಕ ಶೇ. ೪೦ರಷ್ಟು ಅಂಗ್ಲ ಭಾಷೆ ಸೇರಿ ಇನ್ನಿತರ ಭಾಷೆಗಳನ್ನು ಬಳಸುವಂತೆ ಸ್ಪಷ್ಟ ನಿರ್ದೇಶನ ನೀಡಿದೆ. ಈ ನಿಯಮವನ್ನು ಯಾವ ಅಂಗಡಿಯವರು ಪಾಲಿಸುತ್ತಿಲ್ಲ, ಇಂತಹ ಅಂಗಡಿಗಳಿಗೆ ನೋಟಿಸ್ ಕೊಡುವ ಮೂಲಕ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರದಂದು ಪುರಸಭಾ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.