ಕರ್ನಾಟಕದಲ್ಲಿ ಎಲ್ಲಾ ಕಚೇರಿ, ಅಂಗಡಿ, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದಕ್ಕಾಗಿಯೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ, ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಜ್ಞಾನಪೀಠ ಪ್ರಶಸ್ತಿಗಳ ಸಾಮ್ರಾಟ ಕನ್ನಡಿಗರು. ಕನ್ನಡ ಭಾಷೆ ಎಲ್ಲ ಭಾಷೆಗಳಿಗಿಂತ ಶ್ರೀಮಂತ ಭಾಷೆ. ಕನ್ನಡ ಭಾಷೆಯನ್ನು ಉತ್ತುಂಗಕ್ಕೇರಿಸುವಲ್ಲಿ ಪ್ರತಿಯೊಬ್ಬ ಕನ್ನಡಿಗ ದಿಟ್ಟ ಹೆಜ್ಜೆ ಇಡಬೇಕು ಎಂದು ಎಸಿ ಅಬೀದ್ ಗದ್ಯಾಳ ಹೇಳಿದರು.