ಆ್ಯಂಬುಲೆನ್ಸ್ ಸಂಚಾರ ಸ್ಥಗಿತ: ಸರ್ಕಾರಿ ಆಸ್ಪತ್ರೆಗೆ ಕರ್ನಾಟಕ ರಕ್ಷಣಾ ವೇದಿಕೆ ಮುತ್ತಿಗೆ
May 22 2024, 12:48 AM ISTಕಳೆದ ಒಂದು ತಿಂಗಳಿನಿಂದ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಾಹನದ ವಿಮೆ ಪಾವತಿಸದೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಸಾರ್ವಜನಿಕ ರೋಗಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.