ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಸೇವೆಯ ಲಭ್ಯತೆ ಸುಧಾರಿಸಲು, ಪರಿಣಾಮಕಾರಿ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ₹873 ಕೋಟಿ ವೆಚ್ಚದಲ್ಲಿ 88 ವಿವಿಧ ಆಸ್ಪತ್ರೆಗಳ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಇತರೆ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಕೈಗೊಂಡಿರುವ ಶಿಫಾರಸು ವಿರೋಧಿಸಿ ವಕೀಲರು ಬುಧವಾರ ಹೈಕೋರ್ಟ್ ಸೇರಿ ನಗರದ ಎಲ್ಲ ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿದರು.
ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.