ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮ ಆಗಲಿ
Oct 19 2023, 12:45 AM ISTಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮವಾಗಿ ಆಚರಿಸಬೇಕು. ಇದಕ್ಕಾಗಿ ಹಂಪಿಯಲ್ಲಿ ವಿಜಯನಗರ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ-50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದುದ್ದಕ್ಕೂ ನಡೆಯುವ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳಿಗೆ ಸೂಚಿಸಿದರು.