ಪ.ಪಂ. ಆಡಳಿತ ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ಕೆ.ವೆಂಕಟೇಶ್ ಆಯ್ಕೆ
Mar 02 2025, 01:20 AM ISTಮೂಡಿಗೆರೆ, ಪಟ್ಟಣ ಪಂಚಾಯ್ತಿಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಗೆ ಬಿಜೆಪಿಯಿಂದ ಸದಸ್ಯೆ ಆಶಾ ಮೋಹನ್, ಕಾಂಗ್ರೆಸ್ನಿಂದ ಕೆ.ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 7 ಮತ ಪಡೆಯುವ ಮೂಲಕ ಕಾಂಗ್ರೆಸ್ ಸದಸ್ಯ ಕೆ.ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ರಾಜಶೇಖರ್ ಮೂರ್ತಿ ಕರ್ತವ್ಯ ನಿರ್ವಹಿಸಿದರು.