ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ
Oct 22 2023, 01:01 AM ISTಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿಗಳ ಪೈಪೋಟಿ ಆರಂಭವಾಗಿದ್ದು, ಶನಿವಾರ ಜೆಜೆ ಹಟ್ಟಿ ತಿಪ್ಪೇಸ್ವಾಮಿ ವಿನೂತನ ಪಾದಯಾತ್ರೆ ಹಮ್ಮಿಕೊಳ್ಳುವುದರ ಮೂಲಕ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಮಟಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನವದವರೆಗೆ ಸುಮಾರು ಆರು ಕಿಮೀ ವರೆಗೆ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ತಿಪ್ಪೇಸ್ವಾಮಿ ನಂತರ ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥಿಸಿದರು.