ಕಾಂಗ್ರೆಸ್ ಅಧಿವೇಶನದಲ್ಲಿ ನಕಲಿ ಗಾಂಧಿಗಳ ದರ್ಬಾರ್: ಎಚ್ಡಿಕೆ
Dec 27 2024, 12:46 AM ISTಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೆ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್ಗಳಿಲ್ಲ. ೨.೭೫ ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಏನು ಹೇಳುತ್ತೀರಿ? ಕಾಂಗ್ರೆಸ್ ಅಧಿವೇಶನ ಮಾಡುತ್ತಿರುವವರು ಅಸಲಿ ಕಾಂಗ್ರೆಸ್ಸಿಗರಲ್ಲ, ನಕಲಿ ಕಾಂಗ್ರೆಸ್ಸಿಗರು ಎಂದು ವ್ಯಂಗ್ಯವಾಡಿದರು.