ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ
Jul 29 2024, 12:47 AM ISTರಾಜ್ಯದಿಂದ ಚುನಾಯಿತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಹಾಗೂ ಐವರು ಕೇಂದ್ರ ಸಚಿವರು ಕರ್ನಾಟಕ ರಾಜ್ಯಕ್ಕೆ ನಿರೀಕ್ಷಿತ ಅನುದಾನ ತರವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ಪ್ರತಿನಿಧಿಸುವ ರಾಜ್ಯಸಭೆ ಸಂಸದೆ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಯಾವುದೇ ನೂತನ ಕೇಂದ್ರೀಯ ಯೋಜನೆ, ನೀರಾವರಿ, ರಸ್ತೆ, ರೈಲ್ವೆ, ಇನ್ನಿತರೆಗಳ ವಿಶೇಷ ಅನುದಾನ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ.