ಕಾಂಗ್ರೆಸ್ ತತ್ವ ಸಿದ್ಧಾಂತ ವಿರುದ್ಧ ನಡೆದುಕೊಂಡವರ ಮೇಲೆ ಕ್ರಮ
Aug 08 2025, 01:00 AM ISTಕಾಂಗ್ರೆಸ್ ಪಕ್ಷದ ಗಮನಕ್ಕೆ ಬಾರದೆ ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಾವೆಲ್ಲರೂ ಕಾಂಗ್ರೆಸ್ಸಿನವರೇ ಎಂಬಂತೆ ಬಿಂಬಿಸುವ ರೂಪದ ಮೆರವಣಿಗೆ ಮಾಡಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಾಗಿದೆ. ಹುಡಾ ಅಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎಂಬುದನ್ನು ಸಿಎಂ ತೀರ್ಮಾನ ಮಾಡಲಿದ್ದು, ಅದಕ್ಕೆ ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಸದಸ್ಯ ಸಲೀಂ ಅಬ್ದುಲ್ ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರಿಗೆ ನಾವೆಲ್ಲ ಅಧಿಕಾರ ನೀಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಈ ಸಂದರ್ಭದಲ್ಲಿ ತಿಳಿಸಲು ಇಚ್ಚಿಸುತ್ತೇವೆ ಎಂದು ಹೇಳಿದರು.