‘ಚುನಾವಣಾ ಗ್ಯಾರಂಟಿ’ಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕರ್ನಾಟಕ, ತೆಲಂಗಾಣ ಅಥವಾ ಹಿಮಾಚಲ ಪ್ರದೇಶಗಳಲ್ಲಿ ಚುನಾವಣೆ ವೇಳೆ ನೀಡಿದ ಪ್ರತಿ ಭರವಸೆಯನ್ನು ಪಕ್ಷವು ಈಡೇರಿಸಿದೆ ಎಂದಿದ್ದಾರೆ.
ಲಗಾಯ್ತಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿರುವ ಗಣಿನಾಡು ಸಂಡೂರಲ್ಲಿ ಉಪ ಚುನಾವಣಾ ಕಣ ರಂಗೇರಿದೆ. ಬಿರುಸಿನ ಪ್ರಚಾರದ ಭರಾಟೆಯಿಂದಾಗಿ ಈ ಕ್ಷೇತ್ರ ದಿನೇ ದಿನೇ ಜಿದ್ದಾಜಿದ್ದಿಯ ಅಖಾಡವಾಗಿ ಬದಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಜನತೆಯ ಮೇಲೆ ಕಾಳಜಿ ಇದೆ. ಹಸಿದವರಿಗೆ ಮೂರು ಹೊತ್ತು ಅನ್ನ ನೀಡಲೇಬೇಕು ಎಂಬ ಹಂಬಲವಿದೆ ಇನ್ನೂ ಮೂರೂವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಶಿಗ್ಗಾಂವಿ ಮತ್ತು ಚನ್ನಪಟ್ಟಣ ತೀವ್ರ ಕುತೂಹಲ ಮೂಡಿಸಿವೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ತಮ್ಮ ಪುತ್ರರನ್ನು ಕಣಕ್ಕಿಳಿಸಿ ರಾಜಕೀಯದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.