ನಗರದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ
Aug 19 2024, 12:52 AM ISTಈ ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ನೀವು ಬಿಜೆಪಿ ಅವರ ಕೈಗೊಂಬೆಯಾಗಿ, ರಾಜ್ಯಪಾಲರ ಕಚೇರಿಯನ್ನೇ ಬಿಜೆಪಿ ಮುಖಂಡರ ಅಂಗಳವನ್ನಾಗಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಏಜೆಂಟರ ರೀತಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮೂಲಕ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಇಂತಹ ವರ್ತನೆ ಖಂಡಿಸಿ ಆ.೧೯ರ ಸೋಮವಾರ ಬೆಳಿಗ್ಗೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.