ಇಂದು ಮಂಡ್ಯಕ್ಕೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಆಗಮನ
Apr 17 2024, 01:18 AM ISTಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್ಗಾಂಧಿ ಅವರು ಬುಧವಾರ (ಏ.೧೭) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ, ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ಇತರರು ಭಾಗವಹಿಸಲಿದ್ದಾರೆ.