ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ
Apr 15 2024, 01:21 AM ISTಬೆಳಗಾವಿ: ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಭಾನುವಾರ ನಡೆದ ರೆಡ್ಡಿ ಸಮಾಜಗಳ ಸೇರಿದಂತೆ ವಿವಿಧ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ರಾಜ್ಯಕ್ಕೆ ನ್ಯಾಯ ಒದಗಿಸುವ ದಿಸೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ದೊಡ್ಡ ಅಪಾಯದಲ್ಲಿ ಸಿಲುಕಲಿದೆ ಎಂದು ಎಚ್ಚರಿಕೆ ನೀಡಿದರು.