ಇಂದು ಶಿವಮೊಗ್ಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ: ಜಿಲ್ಲಾಧ್ಯಕ್ಷ
Mar 20 2024, 01:19 AM ISTಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೃಹತ್ ರ್ಯಾಲಿ ಮೂಲಕ ಆಗಮಿಸಿ, ಜಿಲ್ಲಾಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ನಡೆಯುವ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಇತರರು ಪಾಲ್ಗೊಳ್ಳುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.