ಬಿಜೆಪಿ ಸಂಸದ, ರಾಜ್ಯಾಧ್ಯಕ್ಷರ ಮನೆಗಳಿಗೆ ಕಾಂಗ್ರೆಸ್ ಮುತ್ತಿಗೆ
Feb 08 2024, 01:33 AM IST ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಆರೋಪಿಸಿ ಬುಧವಾರ ಯುವ ಕಾಂಗ್ರೆಸ್ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ನಿವಾಸಕ್ಕೆ ಹಾಗೂ ಎನ್‌ಎಸ್‌ಯುಐ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕೆಲ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ "ನಮ್ಮ ತೆರಿಗೆ ನಮ್ಮ ಹಕ್ಕು " ದಿಲ್ಲಿ ಚಲೋ ಬೆಂಬಲಿಸಿ, ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.