ಶ್ರೀಕಾಂತ್ ಪೂಜಾರಿ ಬಂಧನದಿಂದ ಕಾಂಗ್ರೆಸ್ ಸರ್ಕಾರದ ಸುಳ್ಳು ಬಯಲು: ಈಶ್ವರಪ್ಪ
Jan 06 2024, 02:00 AM IST1992ರಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟದ ಪ್ರಕರಣದಲ್ಲಿ ಸಿಲುಕಿದ್ದ ಶ್ರೀಕಾಂತ್ ಪೂಜಾರಿ ಈಗ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಸಮಯದಲ್ಲಿ ಕಾನೂನು ವಿಚಾರವಾಗಿ ಬಹುಚರ್ಚಿತ ವ್ಯಕ್ತಿಯಾಗಿದ್ದಾರೆ. ಈ ವಿಚಾರದಲ್ಲಿ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಸುಳ್ಳು ಹೇಳಿದ್ದು ಸಾಬೀತಾಗಿದೆ, ಈ ಕಾರಣಕ್ಕೆ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.