ಕಾಂಗ್ರೆಸ್ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ
Jan 19 2025, 02:19 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ಮೊಟಕುಗೊಂಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಗಾಂಧಿ ಭಾರತ ಕಾರ್ಯಕ್ರಮ ಜ.21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅತ್ಯಂತ ಅದ್ಧೂರಿಯಾಗಿ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ, ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಕರೆ ನೀಡಿದರು.