ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕ
Jan 16 2025, 12:45 AM ISTಅರಕಲಗೂಡು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಬ್ಬಳಿಗೆರೆ ಗ್ರಾಮದ ಕೆ.ಟಿ. ಸೋಮಶೇಖರ್ ಹಾಗೂ ವಿಧಾನಸಭಾ ವ್ಯಾಪ್ತಿಯ ಹಳ್ಳಿಮೈಸೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ. ಪಕ್ಷದ ಬಲವರ್ಧನೆ ಮತ್ತು ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಕಾರ್ಯಕರ್ತರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಇಲ್ಲಿ ಜಯಗಳಿಸುವಂತೆ ಕಾರ್ಯ ನಿರ್ವಹಿಸುವುದಾಗಿ ಹೇಳಿದರು.