ಉಪಚುನಾವಣೆ ಗೆಲುವು ಸಂಭ್ರಮಿಸಿದ ಕಾಂಗ್ರೆಸ್
Nov 24 2024, 01:46 AM ISTರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ಮುಂದೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆ ನಡೆಸಿದರು. ಸುಳ್ಳು, ಅಪಪ್ರಚಾರ, ಕುಟುಂಬ ರಾಜಕಾರಣಕ್ಕೆ ಮತ್ತು ಉದ್ದೇಶ ಪೂರ್ವಕವಾಗಿ ಟೀಕೆ ಟಿಪ್ಪಣಿ ಮಾಡಿರುವ ವ್ಯಕ್ತಿಗಳಿಗೆ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಸ್ಪಷ್ಟ ಸಂದೇಶವನ್ನು ಮತದಾರರು ಕೊಟ್ಟಿದ್ದಾರೆ. ಈ ಮೂರು ಕ್ಷೇತ್ರಗಳ ಜನರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು.