ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆದಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟವು ಗುರುವಾರ ಸಭೆ ಸೇರಿ ಮೈತ್ರಿಕೂಟದ ನಾಯಕನನ್ನು ಆಯ್ಕೆ ಮಾಡಲಿದೆ.
‘ಹರ್ಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ 20 ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ವ್ಯತ್ಯಾಸ ಕಂಡುಬಂದಿದ್ದು, ಅವು ಹ್ಯಾಕ್ ಆಗಿರುವ ಶಂಕೆ ಇದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಹಾಗೂ ಶಂಕಾಸ್ಪದ ಇವಿಎಂಗಳನ್ನು ಸೀಲ್ ಮಾಡಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿದೆ
’ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್ನಂತೆ ನೋಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಪಕ್ಷವು ಮಿತ್ರ ಪಕ್ಷಗಳನ್ನು ನಿರ್ಲಕ್ಷಿಸಿ ಹರ್ಯಾಣದಲ್ಲಿ ಸೋಲುತ್ತಿದ್ದಂತೆಯೇ ಇಂಡಿಯಾ ಕೂಟದ ಹಲವು ಪಕ್ಷಗಳು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಪಕ್ಷದ ಮೇಲೆ ತಿರುಗಿಬಿದ್ದಿವೆ.