ಕಾಂಗ್ರೆಸ್ ಸರ್ಕಾರದಿಂದ ರೈತ ವಿರೋಧಿ ನಡೆ
Apr 07 2024, 01:50 AM ISTಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.