ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವು ಖಚಿತ: ಸುಂದರೇಶ್
Mar 16 2024, 01:47 AM ISTಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆ ಬಲವಾಗಿದೆ. ಎಲ್ಲ ನಾಯಕರು ಒಗ್ಗಟ್ಟಾಗಿ ಈ ಬಾರಿ ನಮ್ಮ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರನ್ನು ಗೆದ್ದೇ ಗೆಲ್ಲಿಸುತ್ತೇವೆ. ಗೀತಾ ಅವರು ಈಗಾಗಲೇ ಸೊರಬದಲ್ಲಿ ಇದ್ದಾರೆ. ಪ್ರಚಾರವನ್ನೂ ಕೂಡ ಕೈಗೊಂಡಿದ್ದಾರೆ. ಅವರ ಸಹೋದರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕೂಡ ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಗೀತಾ ಶಿವರಾಜ್ಕುಮಾರ್ ಜೊತೆಗೆ ನಟ ಶಿವರಾಜ್ಕುಮಾರ್ ಕೂಡ ಪ್ರಚಾರಕ್ಕೆ ಕೈ ಜೋಡಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.