ಎನ್ಸಿಪಿ, ಎಸ್ಟಿಪಿ ಅನುದಾನ ವಂಚಿಸಿದ ಕಾಂಗ್ರೆಸ್ ಸರ್ಕಾರ
Feb 24 2024, 02:33 AM ISTಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. ಕಳೆದ 9 ತಿಂಗಳುಗಳಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರವು ದಲಿತ ಸಮುದಾಯವನ್ನು ವಂಚಿಸುತ್ತ ಬಂದಿದೆ. ಚುನಾವಣೆಯಲ್ಲಿ ದಲಿತರಿಗೆ ಮೀಸಲಾಗಿಟ್ಟಿದ್ದ ೧೧,೧೪೪ ಕೋಟಿ ರೂ ಎಸ್ಸಿಎಸ್ಪಿ, ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಲ್ಲಿ ಬಳಕೆ ಮಾಡಲು ವರ್ಗಾಯಿಸಿ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.