ಕೊಡಗು ಅಭಿವೃದ್ಧಿಗೆ ಕಾಂಗ್ರೆಸ್ ಸಂಸದರೂ ಅಗತ್ಯ: ಡಾ.ಮಂತರ್ ಗೌಡ
Mar 28 2024, 12:53 AM ISTಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರೊಂದಿಗೆ ಕಾಂಗ್ರೆಸ್ ಸಂಸದರು ಕೂಡ ಜೊತೆಯಾದಲ್ಲಿ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.