ಕಾಂಗ್ರೆಸ್ ಸಭೆಯಲ್ಲಿ ಪಕ್ಷ ಸೇರ್ಪಡೆ ವಿಚಾರಕ್ಕೆ ಜಟಾಪಟಿ
Jan 25 2024, 02:05 AM ISTರಬಕವಿ-ಬನಹಟ್ಟಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೇರದಾಳ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ಕೊಣ್ಣೂರರನ್ನು ಆಯ್ಕೆ ಮಾಡಿದ್ದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಪದ್ಮಜೀತ ನಾಡಗೌಡ ಪಾಟೀಲ ನೇತೃತ್ವದ ನೂರಾರು ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ಕರೆತರುವ ವಿಚಾರದಲ್ಲಿ ಕಾರ್ಯಕರ್ತರ ಪರ-ವಿರೋಧ ಚರ್ಚೆಗಳು ನಡೆದು ಕೆಲಕಾಲ ಸಭೆಯಲ್ಲಿ ಗೊಂದಲ ಉಂಟಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಎದುರಲ್ಲಿಯೇ ಈ ಘಟನೆ ನಡೆದಿದ್ದು, ಮುಜುಗರಕ್ಕೆ ಕಾರಣವಾಯಿತು.