ಕಾಂಗ್ರೆಸ್ನಲ್ಲಿ ಬಂಡಾಯ ಸ್ಫೋಟಗೊಂಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಅವರು ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದು, ನಾಮಪತ್ರ ಸಲ್ಲಿಕೆಯ ಗಡುವಿಗೆ 10 ನಿಮಿಷಗಳಿರುವಾಗ ಬೈಕ್ನಲ್ಲಿ ಬಂದು, ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್, ಶಿಗ್ಗಾಂವಿ ಕ್ಷೇತ್ರಕ್ಕೆ ಸತತವಾಗಿ ಆರನೇ ಬಾರಿಗೆ ಮುಸ್ಲಿಂ ಸಮುದಾಯವನ್ನು ಆಯ್ಕೆ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಲುಂಡಿದ್ದ ಯಾಸೀರ್ ಅಹಮದ್ ಪಠಾಣ್ ಅವರಿಗೆ ಟಿಕೆಟ್ ದಯಪಾಲಿಸಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಸದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರ ಹೆಸರನ್ನು ಪಕ್ಷದ ವರಿಷ್ಠರು ಅಂತಿಮಗೊಳಿಸಿದ್ದು, ಬಹುತೇಕ ಮಂಗಳವಾರ ಘೋಷಣೆಯಾಗಲಿದೆ.