ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರದ ಸ್ಥಳ ಮತ್ತು ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ವಿಷಯವು ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.
ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ 100 ವರ್ಷ ಸಂದ ಹಿನ್ನೆಲೆಯಲ್ಲಿ 2 ದಿನಗಳ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಬೆಳಗಾವಿಯಲ್ಲಿ ಗುರುವಾರ ಅದ್ದೂರಿ ಚಾಲನೆ ನೀಡಲಾಯಿತು.
ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ, ಸಂವಿಧಾನ ವಿರೋಧಿ ನಿಲುವು, ಭ್ರಷ್ಟಾಚಾರ ಹಾಗೂ ಸರ್ಕಾರಿ ಯಂತ್ರಗಳ ದುರುಪಯೋಗದ ವಿರುದ್ಧ ''''ನವ ಸತ್ಯಾಗ್ರಹ'''' ಹೆಸರಿನಲ್ಲಿ ಜನಾಂದೋಲನವನ್ನು ಮುಂದಿನ ಒಂದು ವರ್ಷ ದೇಶಾದ್ಯಂತ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ
ಮಹಾತ್ಮ ಗಾಂಧಿ ಕಾಂಗ್ರೆಸ್ಸಿಗೂ ಇಂದಿನ ಕಾಂಗ್ರೆಸ್ಸಿಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ಸಿಗೂ, ನಕಲಿ ಕಾಂಗ್ರೆಸ್ಸಿಗೂ ವ್ಯತ್ಯಾಸ ಇದೆ. ಮಹಾತ್ಮಾ ಗಾಂಧೀಜಿಯವರಿಗೆ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ಸಿನವರು ನಡೆದುಕೊಳ್ಳುತ್ತಿದಾರೆ.
ಇತ್ತೀಚೆಗೆ ತಾನೆ ನಡೆದ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಿಂದಾಗಿ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿ ಗಮನ ಸೆಳೆದಿದ್ದ ಬೆಳಗಾವಿ ನಗರ ಈಗ ಮತ್ತೆ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 39ನೇ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸಜ್ಜುಗೊಂಡಿದೆ.
ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ.