ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬವಿದ್ದಂತೆ
Sep 22 2024, 01:49 AM ISTಈ ಸರ್ಕಾರ ಖಜಾನೆ ದರೋಡೆ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಕೊಡಲು ದುಡ್ಡಿಲ್ಲ, ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನವಿದ್ದು, ಅದು ಯಾವಾಗ ಭುಗಿಲೇಳುತ್ತದೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬ ಇದ್ದ ಹಾಗೆ. ಮಾಡಬಾರದ್ದನ್ನು ಮಾಡಿ ನಮ್ಮದು ಸರ್ಕಾರ ಇದೆ ಅಂತಾರೆ. ಯಾವುದೇ ರಸ್ತೆಯಲ್ಲೂ ನಿರ್ಭಯವಾಗಿ ಗಣೇಶನ ಮೆರವಣಿಗೆ ಮಾಡಲಾಗುತ್ತಿಲ್ಲ. ಇಡೀ ರಾಜ್ಯದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತೆ ಇರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.