ಆಲಮೇಲ ಪ.ಪಂನಲ್ಲಿ ಕಾಂಗ್ರೆಸ್ ಬಿಜೆಪಿ ದೋಸ್ತಿ
Sep 18 2024, 02:05 AM ISTಕನ್ನಡಪ್ರಭ ವಾರ್ತೆ ಆಲಮೇಲ ಕಳೆದ ಒಂದೂವರೆ ತಿಂಗಳಿನಿಂದ ಕುತೂಹಲ ಕೆರಳಿಸಿದ್ದ ಆಲಮೇಲ ಪಟ್ಟಣ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ಬಿಜೆಪಿ ದೋಸ್ತಿಯಾಗುವ ಮೂಲಕ ಸ್ಥಾನಗಳನ್ನು ಹಂಚಿಕೊಂಡಿವೆ. ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದ್ದು, ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಪಾಲಾಗಿದೆ. ಮಂಗಳವಾರ ಪಟ್ಟಣದ ಪಟ್ಟಣ ಪಂಚಾಯತಿ ಕಚೇರಿಯಲ್ಲಿ 11ಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಸಾಧಿಕ್ ಸುಂಬಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ 4ನೇ ವಾರ್ಡ್ ಸದಸ್ಯೆ ಸುಮಾ ಕತ್ತಿ ಮಾತ್ರ ನಾಮಪತ್ರ ಸಲ್ಲಿಸಿದರು.