ಶಾಸಕರೇ ನನ್ನನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಸಿದ್ದಾರೆ
Sep 12 2024, 02:02 AM ISTಈ ಹಿಂದೆ ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಹಾಗೂ ಕಾಂಗ್ರೆಸ್ ಮುಖಂಡರು ಸಭೆ ನಡೆಸಿ, ತನ್ನನ್ನು ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಅಂದಿನಿಂದ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದೇನೆ. ಆದರೆ, ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವರ ಕ್ಷುಲಕ ರಾಜಕಾರಣದಿಂದಾಗಿ ಬೇರೆಯವರ ಹೆಸರು ಹರಿದಾಡುತ್ತಿದೆ. ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾನೇ ಎಂದು ಎಚ್.ಬಿ. ಶಿವಯೋಗಿ ಹೊನ್ನಾಳಿಯಲ್ಲಿ ಸ್ಪಷ್ಟಪಡಿಸಿದರು.