ಕಾಂಗ್ರೆಸ್ ಭ್ರಷ್ಟತೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ
Apr 07 2025, 12:36 AM ISTಕಾಂಗ್ರೆಸ್ ಸರ್ಕಾರದ ಭ್ರಷ್ಟತೆ, ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ, ಎಸ್ಸಿ, ಎಸ್ಟಿ ಅನುದಾನದ ದುರ್ಬಳಕೆ ಹಾಗೂ ೧೮ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ವಿರೋಧಿಸಿ ಮಂಗಳವಾರ ಪಕ್ಷದ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್, ಮೇಲ್ಮನೆ ವಿರೋಧ ಪಕ್ಷದ ನಾಯಕರಾದಂತಹ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಮುಖಂಡರ ನೇತೃತ್ವದಲ್ಲಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇದ್ರ ತಿಳಿಸಿದರು. ೧೮ ಜನ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ಮಾಡಿರುವ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.