ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಸದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರ ಹೆಸರನ್ನು ಪಕ್ಷದ ವರಿಷ್ಠರು ಅಂತಿಮಗೊಳಿಸಿದ್ದು, ಬಹುತೇಕ ಮಂಗಳವಾರ ಘೋಷಣೆಯಾಗಲಿದೆ.
‘ಯೋಗೇಶ್ವರ್ ಅವರು ಮೇಲೆ ಇದ್ದಾರೆ. ದೊಡ್ಡವರು. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಉಪಮುಖ್ಯಮಂತ್ರಿಗಳನ್ನು (ಡಿ.ಕೆ.ಶಿವಕುಮಾರ್) ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಲಾಗಿದೆ.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.