ಎಲ್ಲ ಬೆಲೆ ಏರಿಸಿ ಕಾಂಗ್ರೆಸ್ ಸರ್ಕಾರದಿಂದ ಲೂಟಿ: ಬೊಮ್ಮಾಯಿ
Jun 21 2024, 01:00 AM ISTಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ಲೂಟಿ ಮಾಡುತ್ತಿದೆ. ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಗಾಯದ ಮೇಲೆ ಬರೆ ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕವು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಳಲ್ಲಿ ಖಾಲಿ ಚಿಪ್ಪುಗಳನ್ನು ಹಿಡಿದು ಹಾಗೂ ಡೀಸೆಲ್ ಇಲ್ಲದ ಟ್ರ್ಯಾಕ್ಟರ್ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟಿಸಲಾಯಿತು.