ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾಗೆ ಎನ್ಸಿಪಿ ಬೆಂಬಲ
Apr 26 2024, 12:45 AM ISTಕನ್ನಡಪ್ರಭ ವಾರ್ತೆ ಚಿಕ್ಕೋಡಿ: ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ವರಿಷ್ಠರಾದ ಶರದ ಪವಾರ ಸೂಚನೆ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದೇವೆ. ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದರೇ ಅಪಾಯ. ಈ ಹಿನ್ನೆಲೆಯಲ್ಲಿ ಎನ್ಸಿಪಿ ಪಕ್ಷ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಎನ್ಸಿಪಿ ಮುಖಂಡ ಉತ್ತಮ ಪಾಟೀಲ ಹೇಳಿದರು.