ರಸ್ತೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿ ಕನ್ನಾಪುರದಲ್ಲಿ ಪ್ರತಿಭಟನೆ
Feb 08 2025, 12:31 AM ISTಮೂಡಿಗೆರೆ, ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಕನ್ನಾಪುರ ಸರ್ಕಲ್ನಿಂದ ಬೇವಿನಗುಡ್ಡೆವರೆಗೆ 5 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.